ಕೆಪಿಎಸ್ಸಿ ನೇಮಕಾತಿ ಹಗರಣ: ಬಗೆದಷ್ಟು ಬಯಲಾಗ್ತಿದೆ ಕರ್ಮಕಾಂಡ, ಸಿಐಡಿ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಸಿಐಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮೂವರು ಅಭ್ಯರ್ಥಿಗಳಿಂದ ಬಸವರಾಜ್ ಕನ್ನಾಳೆಗೆ ₹60 ಲಕ್ಷ ನಗದು ಪಾವತಿಯಾಗಿದೆ. ಸದ್ಯ ಬ್ಯಾಂಕ್ ಖಾತೆಗಳಿಂದ ₹1.5 ಕೋಟಿ ಹಣವನ್ನು ಜಪ್ತಿ ಮಾಡಲಾಗಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಸೇರಿ ಐವರು ಮಧ್ಯವರ್ತಿಗಳ ಪಾತ್ರ ಬಯಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 22: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಹಗರಣದ ಸ್ವರೂಪ ಮತ್ತು ಇದುವರೆಗಿನ ತನಿಖೆಯ ಪ್ರಗತಿ ಕುರಿತು ಮಹತ್ವದ ಮಾಹಿತಿ ನೀಡಲಾಗಿದೆ. ವರದಿಯ ಪ್ರಕಾರ, ಮೂವರು ಅಭ್ಯರ್ಥಿಗಳು ಆರೋಪಿ ಬಸವರಾಜ್ ಕನ್ನಾಳೆಗೆ ಒಟ್ಟು ₹60 ಲಕ್ಷ ನಗದನ್ನು ನೀಡಿದ್ದಾರೆ. ಕಿರಣ್ ಗೌಡ ₹10 ಲಕ್ಷ, ಮೊಹಮ್ಮದ್ ಸೋಹೆಲ್ ₹20 ಲಕ್ಷ, ಮತ್ತು ಸಲೀಂ ಒಂಟಿ ₹30 ಲಕ್ಷ ನಗದು ಪಾವತಿಸಿದ್ದಾರೆ. ಇದರ ಜೊತೆಗೆ, ವಿವಿಧ ಬ್ಯಾಂಕ್ ಖಾತೆಗಳಿಂದ ಸುಮಾರು ₹1.5 ಕೋಟಿ ಹಣವನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಹಣದಲ್ಲಿ ಬೀದರ್‌ನ ಲಕ್ಷ್ಮಿ ಸೌಹಾರ್ದ ಬ್ಯಾಂಕ್, ಬಾಲು ರೆಡ್ಡಿ ಮತ್ತು ಕನ್ನಾಳೆ ದಂಪತಿಯ ಖಾತೆಗಳಲ್ಲಿನ ಹಣ ಸೇರಿವೆ. ಬಸವರಾಜ್ ಕನ್ನಾಳೆಯಿಂದ ₹5.60 ಲಕ್ಷ ನಗದನ್ನೂ ವಶಪಡಿಸಿಕೊಳ್ಳಲಾಗಿದೆ.
ಈ ಹಗರಣದಲ್ಲಿ ಬಸವರಾಜ್ ಕನ್ನಾಳೆ ಸೇರಿದಂತೆ ಐವರು ಮಧ್ಯವರ್ತಿಗಳು ಭಾಗಿಯಾಗಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಓಎಂಆರ್ ಶೀಟ್ ತಿದ್ದುಪಡಿಗೆ ನೆರವಾಗಿದ್ದಾರೆ ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ಈಗ ಎಸ್ಐಟಿ ತಂಡಕ್ಕೆ ಹಸ್ತಾಂತರಗೊಂಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್

