ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್ ನೋಡಿದ್ರೆ ದಂಗಾಗೋದು ಗ್ಯಾರೆಂಟಿ !
ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಸಿಐಡಿ ಅಧಿಕಾರಿಗಳಿಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಜ್ಞಾನೇಂದ್ರ ಕುಮಾರ್ ಮತ್ತು ಬಸವರಾಜು ಅಭ್ಯರ್ಥಿಗಳಿಗೆ ನೇರವಾಗಿ ಕರೆ ಮಾಡಿ, 60-80 ಲಕ್ಷ ರೂ.ಗೆ ಹುದ್ದೆ ಮಾರಾಟದ ಡೀಲ್ ನಡೆಸಿದ್ದಾರೆ. ಹಣವನ್ನು ನಗದು ಮತ್ತು ಬ್ಯಾಂಕ್ ವರ್ಗಾವಣೆ ಮೂಲಕ ಸ್ವೀಕರಿಸಿ, ಸರ್ಕಾರಿ ಹುದ್ದೆಗಳನ್ನು ಹರಾಜು ಹಾಕಿದ ಭಯಾನಕ ಯೋಜನೆ ಸಿಐಡಿ ತನಿಖೆಯಲ್ಲಿ ಬಯಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 07: ಕೆಪಿಎಸ್‌ಸಿ ನಡೆಸಿದ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಭಾರಿ ಭ್ರಷ್ಟಾಚಾರವನ್ನು ಸಿಐಡಿ ತನಿಖೆ ಅನಾವರಣಗೊಳಿಸಿದೆ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಾಗೂ ಬಸವರಾಜು ಅಭ್ಯರ್ಥಿಗಳ ಮಾಹಿತಿ ಪಡೆದು, ಪ್ರತಿ ಹುದ್ದೆಗೆ 60 ರಿಂದ 80 ಲಕ್ಷ ರೂಪಾಯಿಗೆ ಡೀಲ್ ಕುದುರಿಸುತ್ತಿದ್ದರು. ಸುಮಾರು 35 ಬ್ಯಾಂಕ್ ಖಾತೆಗಳು ಹಾಗೂ ನಗದು ರೂಪದಲ್ಲಿ ಹಣ ಸಂಗ್ರಹಿಸಿ ಹುದ್ದೆಗಳನ್ನು ಮಾರಾಟ ಮಾಡಿರುವ ಅಕ್ರಮ ಜಾಲ ಬೆಳಕಿಗೆ ಬಂದಿದ್ದು, ಸಿಐಡಿ ತನಿಖೆ ಚುರುಕುಗೊಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
