AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!

ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 06, 2026 | 11:15 AM

Share

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಐಡಿ ನಡುವೆ ಬಿಕ್ಕಟ್ಟು ತಲೆದೋರಿದೆ. ನ್ಯಾಯಾಲಯದ ಆದೇಶದ ಹೊರತಾಗಿಯೂ ಇಡಿ ಪ್ರಮುಖ ದಾಖಲೆಗಳನ್ನು ಸಿಐಡಿಗೆ ನೀಡಲು ನಿರಾಕರಿಸಿದೆ. ಮನಿ ಲಾಂಡರಿಂಗ್ ಮತ್ತು ಕ್ರಿಮಿನಲ್ ಅಂಶಗಳ ತನಿಖೆಯ ವಿಭಿನ್ನ ದೃಷ್ಟಿಕೋನಗಳಿಂದಾಗಿ ತನಿಖೆಯು ಕುಂಠಿತಗೊಂಡಿದೆ.

ಬೆಂಗಳೂರು, ಅಕ್ಟೋಬರ್ 6: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಐಡಿ ನಡುವೆ ತೀವ್ರ ಸ್ವರೂಪದ ಸಂಘರ್ಷ ಮುಂದುವರಿದಿದೆ. ಈ ಪ್ರಕರಣದಲ್ಲಿ ಇಡಿ ಈಗಾಗಲೇ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ. ಆದರೆ, ತನಿಖೆ ನಡೆಸುತ್ತಿರುವ ಸಿಐಡಿ, ಇಡಿ ವಶಪಡಿಸಿಕೊಂಡಿರುವ ಪ್ರಮುಖ ದಾಖಲೆಗಳು ಹಾಗೂ ಸಿಸಿಟಿವಿ ಡಿವಿಆರ್‌ಗಳನ್ನು ಹಂಚಿಕೊಳ್ಳುವಂತೆ ಕೋರಿತ್ತು. ಇಡಿ ಈ ದಾಖಲೆಗಳನ್ನು ನೀಡಲು ನಿರಾಕರಿಸಿದಾಗ, ಸಿಐಡಿ ನ್ಯಾಯಾಲಯದ ಮೊರೆ ಹೋಯಿತು. ಸೆಷನ್ಸ್ ನ್ಯಾಯಾಲಯವು ಬಳಿ ಇರುವ ದಾಖಲಾತಿಗಳನ್ನು ಸಿಐಡಿಗೆ ನೀಡುವಂತೆ ಇಡಿಗೆ ಆದೇಶಿಸಿತು. ತನಿಖಾ ಸಂಸ್ಥೆಗಳ ನಡುವೆ ಸಮನ್ವಯ ಇರಬೇಕು ಎಂದು ನ್ಯಾಯಾಲಯ ಹೇಳಿತ್ತು. ಆದರೆ, ನ್ಯಾಯಾಲಯದ ಆದೇಶದ ಹೊರತಾಗಿಯೂ ಇಡಿ ಅಧಿಕಾರಿಗಳು ಇದುವರೆಗೆ ಯಾವುದೇ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿಲ್ಲ.

ಇಡಿ ಮನಿ ಲಾಂಡರಿಂಗ್ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಿದ್ದರೆ, ಸಿಐಡಿ ಕ್ರಿಮಿನಲ್ ಅಂಶಗಳು ಮತ್ತು ಅಕ್ರಮಗಳ ತನಿಖೆ ನಡೆಸುತ್ತಿದೆ. ಈ ವಿಭಿನ್ನ ದೃಷ್ಟಿಕೋನಗಳು ಹಾಗೂ ದಾಖಲೆಗಳ ಹಂಚಿಕೆಯಾಗದಿರುವುದು ತನಿಖೆಯ ಪ್ರಗತಿಗೆ ಅಡ್ಡಿಯಾಗಿದೆ. ಪ್ರಮುಖ ಸಾಕ್ಷ್ಯಗಳ ಕೊರತೆಯಿಂದ ಸಿಐಡಿ, ಅಪರಾಧ ಪ್ರಕ್ರಿಯೆಗಳನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More