AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ಕೆಪಿಎಸ್​ಸಿಯ ನಾಲ್ವರು ಸದಸ್ಯರಿಗೆ ಇಡಿ ಸಂಕಷ್ಟ ಸಾಧ್ಯತೆ

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ಕೆಪಿಎಸ್​ಸಿಯ ನಾಲ್ವರು ಸದಸ್ಯರಿಗೆ ಇಡಿ ಸಂಕಷ್ಟ ಸಾಧ್ಯತೆ

ರಾಚಪ್ಪಾಜಿ ನಾಯ್ಕ್
| Edited By: |

Updated on: Oct 04, 2026 | 11:06 AM

Share

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕೆಪಿಎಸ್​ಸಿಯ ನಾಲ್ವರು ಸದಸ್ಯರಿಗೆ ಇಡಿ ವಿಚಾರಣೆ ಎದುರಾಗುವ ಸಾಧ್ಯತೆಯಿದೆ. ಮಧ್ಯವರ್ತಿಗಳ ಮೂಲಕ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಸಂಗ್ರಹಿಸುತ್ತಿದ್ದ ವಿಚಾರ ವಿಚಾರಣೆ ವೇಳೆ ಬಹಿರಂಗವಾಗಿದ್ದು, ಅನೇಕ ವಿಚಾರಗಳನ್ನು IAS ಅಧಿಕಾರಿ ಜ್ಞಾನೇಂದ್ರ ಕುಮಾರ್​​ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್​​ 04: ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಕೆಪಿಎಸ್​ಸಿಯ ನಾಲ್ವರು ಸದಸ್ಯರಿಗೆ ಇಡಿ ಸಂಕಷ್ಟ ಸಾಧ್ಯತೆಯಿದೆ ಎನ್ನಲಾಗಿದೆ. ವಿಚಾರಣೆ ವೇಳೆ ನಾಲ್ವರ ಹೆಸರನ್ನು ಜ್ಞಾನೇಂದ್ರ ಬಾಯ್ಬಿಟ್ಟಿದ್ದು, ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​, ಬಿ.ವಿ.ಗೀತಾ, ಶಾಂತಾ ಹೊಸಮನಿ ಸೇರಿದಂತೆ ನಾಲ್ವರಿಗೆ ಇಡಿ ವಿಚಾರಣೆ ಬಿಸಿ ತಟ್ಟುವ ಲಕ್ಷ್ಣಗಳು ಗೋಚರಿಸಿವೆ. ಕೆಲ ಸದಸ್ಯರು, ಸಿಬ್ಬಂದಿಯೂ ಅಭ್ಯರ್ಥಿಗಳಿಂದ ಹಣ ಪಡೆದ ಬಗ್ಗೆ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಮೆರಿಟ್ ಲಿಸ್ಟ್​​ನ ಇದ್ದ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸುತ್ತಿದ್ದ ಸದಸ್ಯರು ಮತ್ತು ಸಿಬ್ಬಂದಿ ಕೂಡಲೇ ಮಧ್ಯವರ್ತಿಗಳ ಮೂಲಕ ಅವರನ್ನು ಸಂಪರ್ಕಿಸಿ ಉದ್ಯೋಗ ಕೊಡಿಸುವ ಭರವಸೆ ನೀಡ್ತಿದ್ದರು. ಅದಕ್ಕೆ ಮುಂಗಡವಾಗಿ 5 ಲಕ್ಷದಿಂದ 10 ಲಕ್ಷದವರೆಗೆ ಹಣ ಪಡೆಯುತ್ತಿದ್ರು. ಆದ್ರೆ ಎಷ್ಟು ಹಣ ಕೊಡಬೇಕು ಎಂದು ಮಾತ್ರ ಹೇಳುತ್ತಿರಲಿಲ್ಲ ಎಂಬ ಬಗ್ಗೆ ಇಡಿ ವಿಚಾರಣೆ ವೇಳೆ ಜ್ಞಾನೇಂದ್ರ ತಿಳಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More