AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ಅಕ್ರಮ ನೇಮಕಾತಿ ಕೇಸ್ ತನಿಖೆ ಎಸ್​ಐಟಿ ಹೆಗಲಿಗೆ! ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ

ಕೆಪಿಎಸ್​ಸಿ ಅಕ್ರಮ ನೇಮಕಾತಿ ಕೇಸ್ ತನಿಖೆ ಎಸ್​ಐಟಿ ಹೆಗಲಿಗೆ! ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ

ಕಿರಣ ಹೆಚ್​. ವಿ.
| Edited By: |

Updated on: Sep 22, 2026 | 12:01 PM

Share

ಕೆಪಿಎಸ್​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಐವರು ಸದಸ್ಯರ ಎಸ್​ಐಟಿ ರಚಿಸಿದೆ. ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ತಂಡಕ್ಕೆ ನೂರು ದಿನದಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಸಿಐಡಿ ತನಿಖೆಯಲ್ಲಿ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ವರ್ಗಾವಣೆ, ಓಎಂಆರ್ ತಿದ್ದುಪಡಿ ಹಾಗೂ ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ನಕಲಿ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಪರೀಕ್ಷೆ ಬರೆಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 22: ಕೆಪಿಎಸ್​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಯಿಂದ ವಿಶೇಷ ತನಿಖಾ ದಳಕ್ಕೆ (ಎಸ್​ಐಟಿ) ಹಸ್ತಾಂತರಿಸುವಂತೆ ಆದೇಶಿಸಿದ್ದು, ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐವರು ಸದಸ್ಯರ ತಂಡವನ್ನು ರಚಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಈ ತಂಡಕ್ಕೆ 100 ದಿನಗಳೊಳಗೆ ತನಿಖೆ ಪೂರ್ಣಗೊಳಿಸಿ, ಪ್ರತಿ ತಿಂಗಳೂ ಪ್ರಗತಿ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ. ಈ ಹಿಂದೆ ಸಿಐಡಿ ನಡೆಸಿದ ತನಿಖೆಯಲ್ಲಿ ಹಗರಣದ ಸ್ವರೂಪ ಮತ್ತು ಅಕ್ರಮಗಳ ಬಗ್ಗೆ ವಿಸ್ತೃತ ಮಾಹಿತಿ ಹೊರಬಿದ್ದಿದೆ. ತನಿಖೆಯನ್ನು ಮೂರು ಹಂತಗಳಲ್ಲಿ ನಡೆಸಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ, ಓಎಂಆರ್ ಶೀಟ್ ತಿದ್ದುಪಡಿ ಮತ್ತು ಸಂದರ್ಶನದಲ್ಲಿನ ಅಕ್ರಮಗಳ ಕುರಿತು ಕೇಂದ್ರೀಕರಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us