ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿಚಾರಣೆ ಮುಂದುವರಿದಿದೆ. ಪರೀಕ್ಷಾ ಪ್ರಕ್ರಿಯೆಗಳ ಉಸ್ತುವಾರಿಯಾಗಿದ್ದ ಜ್ಞಾನೇಂದ್ರ, ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್ ಲೋಪದ ಆರೋಪ ಎದುರಿಸುತ್ತಿದ್ದಾರೆ. ಸಿಐಡಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳು ಡಿಲೀಟ್ ಆಗಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಬೆಂಗಳೂರು, ಆಗಸ್ಟ್ 30: ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ವಿಚಾರಣೆ ಮುಂದುವರಿದಿದೆ. ನೋಟಿಫಿಕೇಶನ್ ಹೊರಡಿಸಿದಾಗಿನಿಂದ ಫಲಿತಾಂಶ ಪ್ರಕಟಿಸುವವರೆಗೂ ಜ್ಞಾನೇಂದ್ರ ಅವರು ಈ ಪರೀಕ್ಷಾ ಪ್ರಕ್ರಿಯೆಯ ಉಸ್ತುವಾರಿ ಜವಾಬ್ದಾರಿ ಹೊತ್ತಿದ್ದರು. ಹೀಗಾಗಿ ಒಎಂಆರ್ ಶೀಟ್‌ಗಳ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್ ನಿರ್ವಹಣೆಯಲ್ಲಿನ ಲೋಪಗಳ ಕುರಿತು ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಅವರನ್ನು ಪ್ರಶ್ನಿಸುತ್ತಿದ್ದಾರೆ. ಖಾಸಗಿ ಸ್ಥಳಗಳಲ್ಲಿ ಅಭ್ಯರ್ಥಿಗಳಿಗೆ ತರಬೇತಿ ನೀಡಿದ ಆರೋಪವೂ ಅವರ ಮೇಲಿದೆ. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ಸಮರ್ಪಕ ನಿರ್ವಹಣೆ ಆಗದಿರುವ ಬಗ್ಗೆಯೂ ಸಿಐಡಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ಸತತ ಎರಡು ದಿನಗಳ ವಿಚಾರಣೆಯ ನಂತರವೂ ಜ್ಞಾನೇಂದ್ರ ಕುಮಾರ್ ಅವರು ಸಮರ್ಪಕ ಉತ್ತರ ನೀಡದ ಕಾರಣ ಸಿಐಡಿ ನಿನ್ನೆ ಮಧ್ಯರಾತ್ರಿ ಅವರನ್ನು ಬಂಧಿಸಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
