ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಆರ್. ಅಶೋಕ್ ಒಳಗೊಂಡ ಬಿಜೆಪಿ ನಿಯೋಗ ಭೇಟಿ
KPSC Scam: ಕೆಪಿಎಸ್‌ಸಿಯಲ್ಲಿ ನಡೆದ ಪಶುವೈದ್ಯರ ನೇಮಕಾತಿ ಹಗರಣ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿಯಾಗಿತು. ಈ ವೇಳೆ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಆ ಬಳಿಕ ಮಾತನಾಡಿದ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, ಜುಲೈ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತೀವ್ರ ಚರ್ಚೆ ಹಿನ್ನಲೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರನ್ನೊಳಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಿಯೋಗವು ಬೆಂಗಳೂರಿನ ಕೆಪಿಎಸ್‌ಸಿ ಕಚೇರಿಗೆ ಭೇಟಿ ನೀಡಿದೆ. ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿಯಾಗಿರುವ ನಿಯೋಗ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಚರ್ಚೆ ನಡೆಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

