ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, ತನಿಖೆ CIDಗೆ ವರ್ಗಾವಣೆ ಮಾಡಿ ಆದೇಶ

Edited By:

Updated on: Jul 28, 2026 | 12:54 PM

ಕೆಪಿಎಸ್ಸಿ ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಸುಮಾರು 60% ಹುದ್ದೆಗಳನ್ನು ಹಣಕ್ಕೆ ಮಾರಾಟ ಮಾಡಲಾಗಿದೆ ಹಾಗೂ ಪ್ರತಿ ಹುದ್ದೆಗೆ 80 ಲಕ್ಷ ರೂ. ಲಂಚ ನಿಗದಿಯಾಗಿತ್ತು ಎಂಬ ಗಂಭೀರ ಆರೋಪವಿದೆ. ಮೂರು ಎಫ್‌ಐಆರ್‌ಗಳ ಪೈಕಿ ಎರಡನ್ನು ಸಿಐಡಿ ವಹಿಸಿಕೊಂಡಿದೆ.

ಬೆಂಗಳೂರು, ಜುಲೈ 28: ಕೆಪಿಎಸ್ಸಿ ಪಶುವೈದ್ಯರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಈಗ ಸಿಐಡಿ ವಹಿಸಿಕೊಂಡಿದೆ. ಪಶುವೈದ್ಯರ ನೇಮಕಾತಿಯಲ್ಲಿ ಸುಮಾರು 60% ಹುದ್ದೆಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಗಂಭೀರ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಪ್ರತಿ ಹುದ್ದೆಗೆ 80 ಲಕ್ಷ ರೂಪಾಯಿ ಲಂಚ ನಿಗದಿಯಾಗಿತ್ತು ಎನ್ನುವ ಆರೋಪದ ಆಡಿಯೋ ಸಹ ವೈರಲ್ ಆಗಿತ್ತು. ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದ್ದರು.

ಈ ಅಕ್ರಮ ನೇಮಕಾತಿ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಇವುಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದರೆ, ಉಳಿದ ಎರಡು ಪ್ರಕರಣಗಳನ್ನು ಹೆಚ್ಚಿನ ಮತ್ತು ಸಮಗ್ರ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿದೆ. ಡಿಜಿಐಜಿಪಿ ಆದೇಶದಂತೆ ಈ ವರ್ಗಾವಣೆ ನಡೆದಿದ್ದು, ಸಿಐಡಿ ತಂಡವು ಮುಂದಿನ ತನಿಖೆಯನ್ನು ನಡೆಸಲಿದೆ. ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರದ ಆರೋಪಗಳಿಗೆ ಎಡೆಮಾಡಿಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More