AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ದಿನಗಳ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್! ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

40 ದಿನಗಳ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್! ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 24, 2026 | 2:36 PM

Share

ಸೆಪ್ಟೆಂಬರ್ 13ರಂದು ನಾಪತ್ತೆಯಾಗಿದ್ದ ಕೆಆರ್‌ಐಡಿಎಲ್ ಎಇಇ ಪರ್ವೀಜ್ ಅಹಮದ್ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆಯಾಗಿದ್ದಾರೆ. ಗುತ್ತಿಗೆದಾರರ ಕಿರುಕುಳ ಮತ್ತು ಕಾಮಗಾರಿಗಳಿಗೆ ಹಣ ಬಿಡುಗಡೆಯಾಗದ ಕಾರಣ ಪತ್ರ ಬರೆದಿಟ್ಟು ಅವರು ನಾಪತ್ತೆಯಾಗಿದ್ದರು. ಪೊಲೀಸರು ಅವರನ್ನು ಮುಂಬೈನಿಂದ ಕರೆತಂದು ಗದಗದಲ್ಲಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಗದಗ, ಅಕ್ಟೋಬರ್ 24: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್) ದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಪರ್ವೀಜ್ ಅಹಮದ್ ನಾಪತ್ತೆ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಸೆಪ್ಟೆಂಬರ್ 13ರಂದು ನಾಪತ್ತೆಯಾಗಿದ್ದ ಪರ್ವೀಜ್, ‘‘ನನ್ನನ್ನು ಹುಡುಕಬೇಡಿ’’ ಎಂದು ಪತ್ರ ಬರೆದಿಟ್ಟು ಹೋಗಿದ್ದರು. ಗುತ್ತಿಗೆದಾರರು ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದಾರೆ ಹಾಗೂ ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ತಮಗೆ ಬೇರೆ ಮಾರ್ಗವಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದರು. ಈ ಘಟನೆಯು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಪೊಲೀಸರು ಪರ್ವೀಜ್‌ಗಾಗಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದರು.

ಸದ್ಯ ಪರ್ವೀಜ್ ಅಹಮದ್ ಅವರು ಮುಂಬೈನಲ್ಲಿ ಪತ್ತೆಯಾಗಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿ ಬಡಾವಣೆ ಪೊಲೀಸರು ಅವರನ್ನು ಮುಂಬೈನಿಂದ ಕರೆತಂದಿದ್ದಾರೆ. ಈಗ ಅವರನ್ನು ಗದಗದಲ್ಲಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪರ್ವೀಜ್ ಅಹಮದ್ ಯಾಕೆ ನಾಪತ್ತೆಯಾಗಿದ್ದರು, ಮುಂಬೈಗೆ ಹೇಗೆ ತಲುಪಿದರು ಮತ್ತು ಅಲ್ಲಿ ಏನು ಮಾಡುತ್ತಿದ್ದರು ಎಂಬ ಬಗ್ಗೆ ಹೆಚ್ಚಿನ ವಿವರಗಳು ಪೊಲೀಸ್ ವಿಚಾರಣೆಯ ಬಳಿಕ ಹೊರಬೀಳಬೇಕಿದೆ. ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದ ಈ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More