AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!

ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!

ಅಶೋಕ್​ ಪೂಜಾರಿ
| Edited By: |

Updated on: Oct 06, 2026 | 12:08 PM

Share

ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜು ಹಾಸ್ಟೆಲ್ ಅಸ್ವಚ್ಛತೆ ಹಾಗೂ ದುಃಸ್ಥಿತಿಗೆ ತಲುಪಿದ್ದು, ನೀಟ್ ವಿದ್ಯಾರ್ಥಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಕೊಳೆಚೆ ನೀರಿನ ಹರಿವು, ಪಾಳುಬಿದ್ದ ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರಿಪಡಿಸಲು ಸೂಚಿಸಿದ್ದಾರೆ.

ಕಾರವಾರ, ಅಕ್ಟೋಬರ್ 06: ಕಾರವಾರ ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಸಂಸ್ಥೆ (KRIMS) ತನ್ನ ಆಸ್ಪತ್ರೆ ಮತ್ತು ಹಾಸ್ಟೆಲ್‌ನ ಅವ್ಯವಸ್ಥೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪಾಸ್ ಮಾಡಿ ಪ್ರವೇಶ ಪಡೆದಿರುವ ವೈದ್ಯಕೀಯ ವಿದ್ಯಾರ್ಥಿಗಳು ಹಾಸ್ಟೆಲ್‌ನ ದುಃಸ್ಥಿತಿಯನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

ಪುರುಷರ ಹಾಸ್ಟೆಲ್ ಕಟ್ಟಡವು ಪಾಳುಬಿದ್ದ ಬಂಗಲೆಯಂತೆ ಕಾಣುತ್ತದೆ. ಅಲ್ಲಿ ಸ್ವಚ್ಛತೆಯ ಕೊರತೆ, ಅಸ್ವಚ್ಛ ಕೊಠಡಿಗಳು ಮತ್ತು ಶೌಚಾಲಯಗಳು, ತುಕ್ಕು ಹಿಡಿದ ಕಿಟಕಿಗಳು, ಮುರಿದ ಬಾಗಿಲುಗಳು ಹಾಗೂ ಬಿರುಕು ಬಿಟ್ಟ ಗೋಡೆಗಳಿವೆ. ಹಾಸ್ಟೆಲ್ ಪಕ್ಕದಲ್ಲೇ ಕೊಳೆಚೆ ನೀರು ಹರಿಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕವನ್ನು ಸೃಷ್ಟಿಸಿದೆ. ಮುಂದಿನ ಐದು ವರ್ಷಗಳ ಕಾಲ ಇಂತಹ ವಾತಾವರಣದಲ್ಲಿ ವಾಸಿಸುವುದು ಮತ್ತು ಓದುವುದು ಹೇಗೆ ಎಂಬ ಚಿಂತೆಯಲ್ಲಿ ವಿದ್ಯಾರ್ಥಿಗಳು ಮುಳುಗಿದ್ದಾರೆ.

ಇತ್ತೀಚೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ಕ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಸ್ವಚ್ಛತೆ, ಕುಡಿಯುವ ನೀರಿನ ಕೊರತೆ ಮತ್ತು ಉಪಕರಣಗಳ ದುರ್ಬಳಕೆ ಕಂಡು ಆಡಳಿತಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಸ್ಪತ್ರೆ ಮತ್ತು ಹಾಸ್ಟೆಲ್‌ನ ನಿರ್ವಹಣೆಯ ಕೊರತೆಯೇ ಈ ಅವ್ಯವಸ್ಥೆಗೆ ಕಾರಣ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಬಹಿರಂಗವಾಗಿ ಹೇಳಲು ಅಂಜುತ್ತಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More