AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಆಪರೇಷನ್​ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್

ಸ್ಟಿಂಗ್ ಆಪರೇಷನ್​ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್

ವಿಕಾಸ್​ ಬಿಎಂ
| Edited By: |

Updated on: Nov 16, 2026 | 5:38 PM

Share

ಸ್ಟಿಂಗ್ ಆಪರೇಷನ್ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಖಾಸಗಿ ಮಾಧ್ಯಮದ‌ ಮುಖ್ಯಸ್ಥ ಹಾಗೂ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆಯೂ ಸಿಸಿಬಿ ಅಧಿಕಾರಿಗಳು ಕೃಪಾ ಆಳ್ವಾರನ್ನು ಎರಡು ಬಾರಿ ವಿಚಾರಣೆಗೊಳಪಡಿಸಿ ಮತ್ತೆ ನೋಟಿಸ್ ನೀಡಿದಾಗ ಬರುವಂತೆ ಸೂಚಿಸಿದ್ದರು. ಅದರಂತೆ ಇಂದು (ನವೆಂಬರ್ 16)  ಮೂರನೇ ಬಾರಿಗೆ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರು, ನವೆಂಬರ್ 16: ಸ್ಟಿಂಗ್ ಆಪರೇಷನ್ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಖಾಸಗಿ ಮಾಧ್ಯಮದ‌ ಮುಖ್ಯಸ್ಥ ಹಾಗೂ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆಯೂ ಸಿಸಿಬಿ ಅಧಿಕಾರಿಗಳು ಕೃಪಾ ಆಳ್ವಾರನ್ನು ಎರಡು ಬಾರಿ ವಿಚಾರಣೆಗೊಳಪಡಿಸಿ ಮತ್ತೆ ನೋಟಿಸ್ ನೀಡಿದಾಗ ಬರುವಂತೆ ಸೂಚಿಸಿದ್ದರು. ಅದರಂತೆ ಇಂದು (ನವೆಂಬರ್ 16)  ಮೂರನೇ ಬಾರಿಗೆ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಬಾರಿ ಸಿಸಿಬಿ ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆ ಹಾಜರಾಗಿದ್ದ ಆಳ್ವಾ, ನನಗೂ ಇದಕ್ಕೂ ಸಂಬಂಧ ಇಲ್ಲ. ನನ್ನನ್ನ ಇದರಲ್ಲಿ ಸಿಕ್ಕಿಹಾಕಿಸಿದ್ದಾರೆ. ವಿಡಿಯೋ ಮಾಡಿದ್ದು ನನಗೆ ಗೊತ್ತೆ ಇರ್ಲಿಲ್ಲ ಎಂದಿದ್ದರು. ಇದೀಗ ವಕೀಲರ ಜೊತೆ ಮತ್ತೆ ವಿಚಾರಣೆ ಹಾಜರಾಗಿದ್ದು, ಇನ್ನೊಂದೆಡೆ ಖಾಸಗಿ ವಾಹಿನಿಯ ಮುಖ್ಯಸ್ಥ ಸಹ ವಿಚಾರಣೆಗೆ ಬಂದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More