‘ಯಶ್ ಈಗಾಗಲೇ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಟಾಕ್ಸಿಕ್ ಬಗ್ಗೆ ಅಜಯ್ ರಾವ್ ಮಾತು

Edited By:

Updated on: Aug 10, 2026 | 8:32 PM

ಕನ್ನಡ ಚಿತ್ರರಂಗದಿಂದ ಶುರುವಾದ ಯಶ್ ಅವರ ಸಿನಿಮಾ ಜರ್ನಿ ಈಗ ಜಾಗತಿಕ ಮಟ್ಟಕ್ಕೆ ತಲುಪಿದೆ. ಬಿಡುಗಡೆಗೆ ಸಜ್ಜಾಗಿರುವ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಖ್ಯಾತ ನಟ ಕೃಷ್ಣ ಅಜಯ್ ರಾವ್ ಅವರು ಯಶ್ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ವಿಡಿಯೋ ನೋಡಿ..

ಕನ್ನಡ ಚಿತ್ರರಂಗದಿಂದ ಶುರುವಾದ ಯಶ್ ಅವರ ಸಿನಿಮಾ ಜರ್ನಿ ಈಗ ಜಾಗತಿಕ ಮಟ್ಟಕ್ಕೆ ತಲುಪಿದೆ. ಬಿಡುಗಡೆಗೆ ಸಜ್ಜಾಗಿರುವ ‘ಟಾಕ್ಸಿಕ್’ (Toxic) ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಖ್ಯಾತ ನಟ ಕೃಷ್ಣ ಅಜಯ್ ರಾವ್ ಅವರು ಯಶ್ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ‘ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಮೇಲೆ ನನಗೂ ನಿರೀಕ್ಷೆ ಇದೆ. ನಿರೀಕ್ಷೆಗಿಂತ ಜಾಸ್ತಿ ಭರವಸೆ ಇದೆ. ಅವರು ಮಾಡಿದ್ದೆಲ್ಲವೂ ಕೈ ಹಿಡಿದಿದೆ. ಅವರ ವಿಷನ್​ಗೆ ಹ್ಯಾಟ್ಸ್​ ಆಫ್. ರಾಜ್ಯ, ದೇಶ ಗೆದ್ದಾಗಿದೆ. ಈಗ ವಿಶ್ವದ ಕಡೆಗೆ ಹೊರಟಿದ್ದಾರೆ. ಅಲ್ಲಿಯೂ ಗೆಲ್ಲುತ್ತಾರೆ ಎಂಬ ನಂಬಿಕೆ ನನಗೆ ಇದೆ. ಅದು ದೊಡ್ಡ ವಿಚಾರ ಅಂತ ನನಗೆ ಅನಿಸುತ್ತಿಲ್ಲ. ಯಾಕೆಂದರೆ, ನಾವು ನೋಡುತ್ತಾ ಇರುತ್ತೇವೆ. ವಿಶ್ವ ಗೆದ್ದ ಬಳಿಕ ಅವರು ಏನು ಮಾಡುತ್ತಾರೋ ಗೊತ್ತಿಲ್ಲ’ ಎಂದು ಕೃಷ್ಣ ಅಜಯ್ ರಾವ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More