ತುಂಬ ಸಾಲ ಮಾಡಿದ್ದೇನೆ, ಎಲ್ಲವನ್ನೂ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್

Edited By:

Updated on: Apr 03, 2025 | 10:48 PM

‘ಯುದ್ಧಕಾಂಡ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಅಜಯ್ ರಾವ್ ಅವರು ನಟಿಸಿ, ನಿರ್ಮಾಣವನ್ನೂ ಮಾಡಿದ್ದಾರೆ. ಸಿನಿಮಾಗಾಗಿ ಅವರು ಸಾಲ ಮಾಡಿದ್ದಾರೆ. ಆ ಕುರಿತು ಟಿವಿ9 ಜೊತೆ ಮಾತನಾಡಿದ್ದಾರೆ. ‘ಇಂದಿಗೂ ರಿಲೀಸ್​ ಹಾಗೂ ಪ್ರಚಾರಕ್ಕಾಗಿ ಕೈ ಚಾಚುತ್ತಿದ್ದೇನೆ. ಅದು ಇನ್ನೂ ಮುಗಿದಿಲ್ಲ’ ಎಂದು ಅಜಯ್ ರಾವ್ ಹೇಳಿದ್ದಾರೆ.

ನಟ ಅಜಯ್ ರಾವ್ ಅವರು ‘ಯುದ್ಧಕಾಂಡ’ (Yuddhakaanda) ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲದೇ, ಈ ಸಿನಿಮಾಗೆ ಅವರು ಬಂಡವಾಳ ಕೂಡ ಹೂಡಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ. ಆ ಬಗ್ಗೆ ಅಜಯ್ ರಾವ್ (Ajay Rao) ಮಾತನಾಡಿದ್ದಾರೆ. ‘ಸಾಲ ಮಾಡಿ ಸಿನಿಮಾಗೆ ಹಾಕಿದ್ದೇನೆ. ಇದು ಬಿಟ್ಟರೆ ನಾನು ಏನನ್ನೂ ಪ್ರೀತಿಸಿಲ್ಲ. ರವಿಚಂದ್ರನ್ ಅವರು ನನಗೆ ಸ್ಫೂರ್ತಿ. ನಾನು ಕೆಟ್ಟ ಉದ್ದೇಶಕ್ಕೆ ಹಣ ಹಾಳು ಮಾಡಿಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಒಳ್ಳೆಯ ಉದ್ದೇಶದಿಂದ ಖರ್ಚು ಮಾಡಿದ್ದೇನೆ. ತುಂಬ ಸಾಲ ಮಾಡಿದ್ದೇನೆ. ಎಲ್ಲವನ್ನೂ ಅಡ ಇಟ್ಟಿದ್ದೇನೆ’ ಎಂದಿದ್ದಾರೆ ಅಜಯ್ ರಾವ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More