ಕೇವಲ ಬಿಲ್ ಮಾಡೋದಕ್ಕಷ್ಟೇ ಕೆಲಸ ಮಾಡ್ತಿದ್ದೀರಾ?: ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​

Edited By:

Updated on: Sep 16, 2026 | 1:13 PM

ಅಭಿವೃದ್ಧಿ ಕಾಮಗಾರಿಗಳ ನಿಧಾನಗತಿಯಿಂದ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮರ್ಥ್ಯ, ಸಂಪನ್ಮೂಲಗಳಿದ್ದರೂ ಇಚ್ಛಾಶಕ್ತಿ ಕೊರತೆ ಕುರಿತು ಪ್ರಶ್ನಿಸಿದ ಅವರು, ಬಿಲ್ ಮಾಡುವುದಕ್ಕೆ ಮಾತ್ರ ಸೀಮಿತರಾಗಿದ್ದೀರಾ ಎಂದು ಗರಂ ಆಗಿದ್ದಾರೆ. ಈ ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 16: ಕಾಮಗಾರಿಗಳ ಪ್ರಗತಿ, ಅನುಷ್ಠಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳ ಬೆವರಿಳಿಸಿದ ಪ್ರಸಂಗ ನಡೆದಿದೆ. ಅಭಿವೃದ್ಧಿಗೆ ಬೇಕಾದ ಸಾಮರ್ಥ್ಯ, ಸಂಪನ್ಮೂಲ ನಮ್ಮಲ್ಲಿಲ್ಲವಾ? ಎಂದು ಜಿಬಿಎ ಅಧಿಕಾರಿಗಳನ್ನ ಸಚಿವರು ತರಾಟೆಗೆ ತೆಗೆದುಕೊಂಡಿದ್ದು, ಎಲ್ಲವೂ ಇದ್ದರೂ ಕೇವಲ ಬಿಲ್ ಮಾಡೋದಕ್ಕಷ್ಟೇ ಕೆಲಸ ಮಾಡ್ತಿದ್ದೀರಾ? ಎಂದು ಅಧಿಕಾರಿಗಳ ಕಾರ್ಯವೈಖರಿಗೆ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಅಭಿವೃದ್ಧಿ ಕಾಮಗಾರಿಗಳ ವೇಗಕ್ಕೆ ಸಚಿವರು ಖಡಕ್​ ಸೂಚನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 16, 2026 01:13 PM
Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More