Karnataka Assembly Polls: ಬ್ಯಾಟರಾಯನಪುರ ಕ್ಷೇತ್ರದ ಚುನಾವಣಾಧಿಕಾರಿಗಳ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ದೂರು
ಸರ್ಕಾರದ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಜನಪ್ರತಿನಿಧಿಗಳ ಕಾಯ್ದೆಯಡಿ ಮೊಕದ್ದಮೆ ದಾಖಲಿಸುವ ಬಗ್ಗೆ ಎಚ್ಚರಿಕೆಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಭೈರೇಗೌಡ ಹೇಳಿದರು.
ಬೆಂಗಳೂರು: ನಗರದ ಬ್ಯಾಟರಾಯನಪುರದ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ (Krishna Byre Gowda) ಇಂದು ತಮ್ಮ ಕ್ಷೇತ್ರದ ಚುನಾವಣಾ ಅಧಿಕಾರಿಗಳ ವಿರುದ್ಧವೇ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Manoj Kumar Meena) ಅವರಿಗೆ ದೂರು ಸಲ್ಲಿಸಿದರು. ಅವರ ಕ್ಷೇತ್ರದಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಕೆಎಮ್ ಮುನೀಂದ್ರ ಕುಮಾರ್ ಮತದಾರಿಗೆ ಹಂಚಲು ಗೋದಾಮೊಂದರಲ್ಲಿ ಸಂಗ್ರಹಿಸಿಟ್ಟಿದ್ದ ರೂ. 3.6 ಕೋಟಿ ಮೌಲ್ಯದ ವಸ್ತುಗಳು ಕೇಂದ್ರ ಜಿಎಸ್ ಟಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪತ್ತೆಯಾದರೂ ಸ್ಥಳೀಯ ಚುನಾವಣಾಧಿಕಾರಿಗಳು ಕುಮಾರ್ ವಿರುದ್ಧ ದೂರು ಕೂಡ ದಾಖಲಿಸಿಕೊಳ್ಳದೆ ಎಂಕ, ಸೀನ ನಾಣಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಬೈರೇಗೌಡ ಹೇಳಿದರು. ಗೋದಾಮಿನಲ್ಲಿ ಬರಾಮತ್ತಾದ ವಸ್ತುಗಳ ಮೇಲೆ ಮುನೀಂದ್ರ ಕುಮಾರ ಫೋಟೋ ಕೂಡ ಇದೆ ಎಂದ ಶಾಸಕರು, ಸರ್ಕಾರದ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಜನಪ್ರತಿನಿಧಿಗಳ ಕಾಯ್ದೆಯಡಿ ಮೊಕದ್ದಮೆ ದಾಖಲಿಸುವ ಬಗ್ಗೆ ಎಚ್ಚರಿಕೆಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಭೈರೇಗೌಡ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ