ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

Edited By:

Updated on: Jun 24, 2026 | 7:30 PM

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಜೊತೆಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.

ಬೆಂಗಳೂರು, (ಜೂನ್ 24): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಜೊತೆಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.

ಇಂತಹ ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆಯನ್ನು ನಾವೇ ಕೃತಕವಾಗಿ ನಿರ್ಮಿಸುತ್ತಿದ್ದೇವೆ
ದಯವಿಟ್ಟು ಮೊದಲು ಸಿಗ್ನಲ್ ಗಳಲ್ಲಿನ ಹಂಪ್ಸ್ ಗಳನ್ನು ತೆಗೆಯಿರಿ, ಗುಂಡಿಮುಚ್ಚಿ, ಸಿಗ್ನಲ್ಗಳ 75 ಮೀಟರ್ ಸುತ್ತಳತೆಯಲ್ಲಿ ಎಲ್ಲೂ ಪಾರ್ಕಿಂಗ್ ಹಾಗೂ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಬೇಡಿ, ಬಸ್ ನಿಲ್ದಾಣಗಳಿಗೂ ಅವಕಾಶ ನೀಡಬೇಡಿ ಎಂದು ಟ್ರಾಫಿಕ್ ಸಮಸ್ಯೆಯ ನಿವಾರಣೆಗೆ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಇದನ್ನೂ ನೋಡಿ: ಫುಟ್ ಪಾತ್ ತೆರವಿಗೆ ದಿಟ್ಟ ಹೆಜ್ಜೆ: ತೊಂದ್ರೆ ಬಂದ್ರೆ ನಿಮ್ಮ ಬೆನ್ನಿಗೆ ನಾನಿದ್ದೇನೆ ಎಂದ ಕೃಷ್ಣ ಬೈರೇಗೌಡ

 

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More