AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ

ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ

ಪ್ರಸನ್ನ ಗಾಂವ್ಕರ್​
| Edited By: |

Updated on: Jan 05, 2026 | 2:22 PM

Share

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಕಟ್ಟಡಗಳ ತೆರವು ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ. ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರು, ಜನವರಿ 05: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದಿದ್ದಾರೆ. ಅಲ್ಲದೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು ಕೇಂದ್ರ ಸರ್ಕಾರಕ್ಕೆ ಹೊಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಫೇಲ್ಯೂರ್​​ ವಿರುದ್ಧ ಬಿಜೆಪಿ ಹೋರಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More