ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಕಟ್ಟಡಗಳ ತೆರವು ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ. ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಎಂದು ಅವರು ಪ್ರಶ್ನಿಸಿದ್ದಾರೆ.
ಬೆಂಗಳೂರು, ಜನವರಿ 05: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದಿದ್ದಾರೆ. ಅಲ್ಲದೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು ಕೇಂದ್ರ ಸರ್ಕಾರಕ್ಕೆ ಹೊಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಫೇಲ್ಯೂರ್ ವಿರುದ್ಧ ಬಿಜೆಪಿ ಹೋರಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
