ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಧ್ಯರಾತ್ರಿ 12ರ ವರೆಗೆ ಭಕ್ತರಿಗೆ ದರ್ಶನ ಅವಕಾಶ

Edited By:

Updated on: Sep 04, 2026 | 8:19 AM

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ಪೂಜೆಗಳು, ಅಲಂಕಾರಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತರ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 4: ಬೆಂಗಳೂರು ನಗರದಲ್ಲಿ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಗವಾನ್ ಶ್ರೀಕೃಷ್ಣನ ಜನ್ಮದಿನದ ಅಂಗವಾಗಿ, ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಶುಭ ಸಂದರ್ಭದಲ್ಲಿ, ಇಸ್ಕಾನ್ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಆಕರ್ಷಕ ಅಲಂಕಾರಗಳು ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More