ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ

Updated on: Feb 24, 2026 | 8:29 AM

ನಟಿ ಕೃತಿ ಸನೋನ್ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಕಬಿರ್ ಬಹಿಯಾ ಜೊತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ಇವರ ಇತ್ತೀಚೆಗೆ ಫೋಟೋಗಳು ವೈರಲ್ ಆಗಿವೆ. ಇವರು ಲಂಡನ್​ ಅಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ವಿವಿಧ ರೀತಿಯ ಕಮೆಂಟ್​​ಗಳು ಬಂದಿವೆ.

ಬಾಲಿವುಡ್​​ನ ಬೇಡಿಕೆಯ ನಟಿ ಕೃತಿ ಸನೋನ್ ಅವರು ಕಬೀರ್ ಬಹಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇವರು ಲಂಡನ್​​ನಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಕೃತಿ ಹಾಗೂ ಕಬಿರ್ ಲಂಡನ್​ ಅಲ್ಲಿ ಕಾಣಿಸಿಕೊಂಡಿದ್ದು ಯಾವಾಗ ಎನ್ನುವ ಸ್ಪಷ್ಟನೆ ಸಿಕ್ಕಿಲ್ಲ. ಕಬೀರ್ ಅವರು ಮಾಜಿ ಕ್ರಿಕೆಟರ್ ಎಂಎಸ್​ ಧೋನಿಗೆ ಅತ್ಯಾಪ್ತರು. ಲಂಡನ್ ಅಲ್ಲಿ ತಮ್ಮದೆ ಟ್ರಾವೆಲ್ ಏಜೆನ್ಸಿ ಹೊಂದಿರೋ ಕಬೀರ್ ಅವರ ಆಸ್ತಿ 4 ಸಾವಿರ ಕೋಟಿ ರೂಪಾಯಿ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More