Assembly Polls: ಎಲ್ಲ ಪಕ್ಷಗಳ ಯಾತ್ರೆಯಂತೆ ಗಾಲಿ ಜನಾರ್ಧನ ರೆಡ್ಡಿಯವರ ಕಲ್ಯಾಣ ಯಾತ್ರೆ ಆರಂಭ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 11:31 AM

ಮಂಗಳವಾರ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಬಳಿಯ ಪಂಪಾ ಸರೋವರದಲ್ಲಿ (Pampa Lake) ತಮ್ಮ ಧರ್ಮಪತ್ನಿ ಅರುಣ ಲಕ್ಷ್ಮಿ ಮತ್ತು ಇತರ ಕೆಲ ಜನರೊಂದಿಗೆ ಪೂಜೆ ಸಲ್ಲಿಸಿದರು,

ಕೊಪ್ಪಳ: ಇದು ಭಾರತ ಜೋಡೋ ಯಾತ್ರೆ, ಜನಸಂಕಲ್ಪ ಯಾತ್ರೆ, ಪ್ರಜಾಧ್ವನಿ ಯಾತ್ರೆ, ಪಂಚರತ್ನ ಯಾತ್ರೆಗಳ ಜಮಾನಾ ಮಾರಾಯ್ರೇ. ಈ ಯಾತ್ರೆಗಳಿಗೆ ಲೇಟೆಸ್ಟ್ ಸೇರ್ಪಡೆಯೆಂದರೆ, ಕಲ್ಯಾಣ ಯಾತ್ರೆ (Kalyana Yatre). ಈ ಯಾತ್ರೆ ಯಾರದ್ದು ಅಂತ ನಿಮಗೆ ಆಶ್ಚರ್ಯವಾಗುತ್ತಿರಬಹುದು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಗಾಲಿ ಜನಾರ್ಧನ ರೆಡ್ಡಿಯವರು (Gali Janardhan Reddy) ಮಂಗಳವಾರ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಬಳಿಯ ಪಂಪಾ ಸರೋವರದಲ್ಲಿ (Pampa Lake) ತಮ್ಮ ಧರ್ಮಪತ್ನಿ ಅರುಣ ಲಕ್ಷ್ಮಿ ಮತ್ತು ಇತರ ಕೆಲ ಜನರೊಂದಿಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ಕಲ್ಯಾಣ ರಥಯಾತ್ರೆಗೆ ಚಾಲನೆ ನೀಡಿದರು. ಮಂಗಳವಾರ ಬೆಳಗ್ಗೆಯಿಂದಲೇ ರೆಡ್ಡಿ ದಂಪತಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 31, 2023 11:31 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.