ಬಿಜೆಪಿ ಸೇರುವ ಯೋಚನೆಯಿಲ್ಲ ಆದರೆ ಅವರು ಬಯಸಿದರೆ ಹೊಂದಾಣಿಕೆಗೆ ಸಿದ್ಧನಿದ್ದೇನೆ: ಗಾಲಿ ಜನಾರ್ಧನ ರೆಡ್ಡಿ, ಶಾಸಕ

|

Updated on: Jan 29, 2024 | 11:35 AM

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ತನ್ನಲ್ಲೂ ಇದೆ, ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ತಯಾರಿದ್ದೇನೆ ಎಂದು ರೆಡ್ಡಿ ಹೇಳಿದರು.

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು ಬಿಜೆಪಿಗೆ ವಾಪಸ್ಸು ಹೋಗಲಿದ್ದಾರೆಂಬ ವದಂತಿ ಕಳೆದ ವಾರದಿಂದ ಹಬ್ಬಿದೆ. ಅದಕ್ಕೆ ಪುಷ್ಠಿ ನೀಡುವ ಹೇಳಿಕೆಗಳನ್ನು ಖುದ್ದು ಜನಾರ್ಧನ ರೆಡ್ಡಿ ಮತ್ತು ಅವರ ಸಹೋದರ ಗಾಲಿ ಸೋಮಶೇಖರ ರೆಡ್ಡಿ (Gali Somashekhar Reddy) ನೀಡಿದ್ದರು. ಇವತ್ತು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜನಾರ್ಧನ ರೆಡ್ಡಿ, ಬಿಜೆಪಿ ಸೇರುವ ಬಯಕೆ ವ್ಯಕ್ತಪಡಿಸಿಲ್ಲ ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧನಿರುವುದಾಗಿ ಹೇಳಿದರು. ನರೇಂದ್ರ ಮೋದಿಯವರು (PM Narendra Modi) ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ತನ್ನಲ್ಲೂ ಇದೆ, ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ತಯಾರಿದ್ದೇನೆ ಎಂದು ರೆಡ್ಡಿ ಹೇಳಿದರು. ಹೊಂದಾಣಿಕೆ ನಡೆಯದೇ ಹೋದರೂ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ ಜನಾರ್ಧನ ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ