AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಅ. 21ರವರೆಗೆ ಕೆಆರ್​ಎಸ್ ಬೃಂದಾವನದಲ್ಲಿ ಕಾವೇರಿ ಆರತಿ

ಇಂದಿನಿಂದ ಅ. 21ರವರೆಗೆ ಕೆಆರ್​ಎಸ್ ಬೃಂದಾವನದಲ್ಲಿ ಕಾವೇರಿ ಆರತಿ

ದಿಲೀಪ್​, ಚೌಡಹಳ್ಳಿ
| Edited By: |

Updated on: Oct 16, 2026 | 8:05 AM

Share

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಭವ್ಯ ಕಾವೇರಿ ಆರತಿ ಕಾರ್ಯಕ್ರಮ ಆರಂಭವಾಗಲಿದೆ. ಸಿಎಂ ಡಿಕೆ ಶಿವಕುಮಾರ್ ಸಂಜೆ 6 ಗಂಟೆಗೆ ಚಾಲನೆ ನೀಡಲಿದ್ದು, ಅಕ್ಟೋಬರ್ 21ರವರೆಗೆ ನಿತ್ಯ ಆರತಿ ನಡೆಯಲಿದೆ. ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾಡಳಿತ ಇದನ್ನು ಆಯೋಜಿಸಿದ್ದು, ಹಲವು ಸಚಿವರು ಭಾಗವಹಿಸಲಿದ್ದಾರೆ.

ಮಂಡ್ಯ, ಅಕ್ಟೋಬರ್ 16: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಪ್ರಸಿದ್ಧ ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಭವ್ಯ ಕಾವೇರಿ ಆರತಿ ಕಾರ್ಯಕ್ರಮ ಆರಂಭವಾಗಲಿದೆ. ಕಾವೇರಿ ನದಿಗೆ ಪೂಜೆ ಸಲ್ಲಿಸುವ ಈ ಮಹತ್ವದ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸಂಜೆ 6 ಗಂಟೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಈ ಕಾವೇರಿ ಆರತಿ ಕಾರ್ಯಕ್ರಮವು ಅಕ್ಟೋಬರ್ 21ನೇ ತಾರೀಖಿನವರೆಗೆ ನಿರಂತರವಾಗಿ ನಡೆಯಲಿದೆ. ಪ್ರತಿದಿನ ಸಂಜೆ 6 ಗಂಟೆಗೆ ಸರಿಯಾಗಿ ಕೆಆರ್​ಎಸ್ ಬೃಂದಾವನದಲ್ಲಿ ಆರತಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ಇಲಾಖೆ ಹಾಗೂ ಮಂಡ್ಯ ಜಿಲ್ಲಾಡಳಿತವು ಜಂಟಿಯಾಗಿ ಈ ಭವ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಈ ಉದ್ಘಾಟನಾ ಸಮಾರಂಭದಲ್ಲಿ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ. ಸಚಿವರಾದ ಎನ್. ಚಲುವರಾಯಸ್ವಾಮಿ, ಎಂಪಿ ನರೇಂದ್ರ ಸ್ವಾಮಿ, ಕೆ.ಜೆ. ಜಾರ್ಜ್, ಶಿವರಾಜ್ ತಂಗಡಗಿ ಮತ್ತು ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More