AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್ ಡ್ಯಾಂನಿಂದ ಬರೋಬ್ಬರಿ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ! ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ

ಕೆಆರ್​ಎಸ್ ಡ್ಯಾಂನಿಂದ ಬರೋಬ್ಬರಿ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ! ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ

ದಿಲೀಪ್​, ಚೌಡಹಳ್ಳಿ
| Edited By: |

Updated on:Aug 18, 2025 | 8:09 AM

Share

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ಜೂನ್​​ನಲ್ಲೇ ಭರ್ತಿಯಾಗಿದ್ದ ಕೆಆರ್​ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದ್ದು, ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರಬವಾಹ ಭೀತಿ ಎದುರಾಗಿದೆ. ಡ್ಯಾಂನಿಂದ ನೀರು ಬಿಡುಗಡೆ ಮಾಡುತ್ತಿರುವ ವಿಡಿಯೋ ಇಲ್ಲಿದೆ.

ಮಂಡ್ಯ, ಆಗಸ್ಟ್ 18: ಮುಂಗಾರು ಮಳೆ ಅಬ್ಬರ ಮತ್ತೆ ಜೋರಾಗಿದ್ದು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ವರ್ಷಧಾರೆಯಾಗುತ್ತಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಎಆರ್​ಎಸ್ ಡ್ಯಾಂ ಭರ್ತಿಯಾಗಿದ್ದು, ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಎಆರ್​ಎಸ್ ಜಲಾಶಯ ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 18, 2025 08:06 AM

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More