ಕೆಆರ್ಎಸ್ ಡ್ಯಾಂನಿಂದ ಬರೋಬ್ಬರಿ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ! ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ಜೂನ್ನಲ್ಲೇ ಭರ್ತಿಯಾಗಿದ್ದ ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದ್ದು, ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರಬವಾಹ ಭೀತಿ ಎದುರಾಗಿದೆ. ಡ್ಯಾಂನಿಂದ ನೀರು ಬಿಡುಗಡೆ ಮಾಡುತ್ತಿರುವ ವಿಡಿಯೋ ಇಲ್ಲಿದೆ.
ಮಂಡ್ಯ, ಆಗಸ್ಟ್ 18: ಮುಂಗಾರು ಮಳೆ ಅಬ್ಬರ ಮತ್ತೆ ಜೋರಾಗಿದ್ದು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ವರ್ಷಧಾರೆಯಾಗುತ್ತಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಎಆರ್ಎಸ್ ಡ್ಯಾಂ ಭರ್ತಿಯಾಗಿದ್ದು, ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಎಆರ್ಎಸ್ ಜಲಾಶಯ ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು.
Published on: Aug 18, 2025 08:06 AM