KRS Back Water: ಕೆಆರ್ಎಸ್ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣವಾಗಿ ಗೋಚರಿಸುತ್ತಿರುವ ಪುರಾತನ ದೇಗುಲ!
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಪ್ರಸ್ತುತ 81 ಅಡಿಗೆ ತಲುಪಿದೆ. ಇದರಿಂದಾಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಸಂಪೂರ್ಣವಾಗಿ ಗೋಚರಿಸುತ್ತಿದೆ. 90 ಅಡಿಗೆ ನೀರಿನ ಮಟ್ಟ ಕುಸಿದಾಗ ಈ ದೇವಾಲಯವು ಭಾಗಶಃ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ.
ಮಂಡ್ಯ, ಜೂನ್ 13: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಪ್ರಸ್ತುತ 81 ಅಡಿಗೆ ತಲುಪಿದೆ. ಇದರಿಂದಾಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಸಂಪೂರ್ಣವಾಗಿ ಗೋಚರಿಸುತ್ತಿದೆ. 90 ಅಡಿಗೆ ನೀರಿನ ಮಟ್ಟ ಕುಸಿದಾಗ ಈ ದೇವಾಲಯವು ಭಾಗಶಃ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಆನಂದೂರು ಹಿನ್ನೀರಿನ ಪ್ರದೇಶದಲ್ಲಿರುವ ಈ ದೇವಾಲಯವು ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನೀರಿನ ಮಟ್ಟ ಕುಸಿತದಿಂದ ಸ್ಪಷ್ಟವಾಗಿ ಕಾಣಿಸುತ್ತಿರುವ ದೇವಾಲಯದ ಸುತ್ತಮುತ್ತ ಫೋಟೋಶೂಟ್ ಮಾಡಿಸಿಕೊಳ್ಳಲು ಜನರು ದೂರದ ಊರುಗಳಿಂದ ಆಗಮಿಸುತ್ತಿದ್ದಾರೆ. ಕೆಆರ್‌ಎಸ್ ಹಿನ್ನೀರಿನಲ್ಲಿ ಈ ಹಿಂದೆ ಮುಳುಗಡೆಯಾಗಿದ್ದ ಸುಮಾರು 10-15 ಗ್ರಾಮಗಳು ಮತ್ತು ಕೆಲವು ದೇವಾಲಯಗಳನ್ನು ಸ್ಥಳಾಂತರಿಸಲಾಗಿತ್ತು. ಆದರೆ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯವನ್ನು ಮಾತ್ರ ಅದೇ ಸ್ಥಳದಲ್ಲಿ ಉಳಿಸಿಕೊಳ್ಳಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು

