KRS​ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌: ಮಹದೇವಪ್ಪ ಹೇಳಿಕೆಗೆ ಯದುವೀರ್ ತಿರುಗೇಟು

ವಿವೇಕ ಬಿರಾದಾರ

Updated on: Aug 03, 2025 | 7:20 PM

ಸಚಿವ ಎಚ್‌.ಸಿ. ಮಹದೇವಪ್ಪ ಅವರು ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಹೇಳಿದ್ದಕ್ಕೆ ಬಿಜೆಪಿ ಸಂಸದ ಯದುವೀರ್ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ಲಾಭಕ್ಕಾಗಿ ಮಾಡಿದ ಹೇಳಿಕೆ ಎಂದು ಯದುವೀರ್ ಆರೋಪಿಸಿದ್ದಾರೆ. ಕಾಂಗ್ರೆಸ್ ಇತಿಹಾಸ ತಿರುಚುತ್ತಿದೆ ಎಂದು ಅವರು ಆರೋಪಿಸಿ, ಇತಿಹಾಸದ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುವಂತೆ ಸಲಹೆ ನೀಡಿದ್ದಾರೆ.

KRS​ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂದು ಹೇಳಿಕೆ ನೀಡಿದ ಸಚಿವ ಹೆಚ್‌.ಸಿ.ಮಹದೇವಪ್ಪಗೆ ಬಿಜೆಪಿ ಸಂಸದ ಯದುವೀರ್‌ ಒಡೆಯರ್​ ಅವರು ತಿರುಗೇಟು ನೀಡಿದ್ದಾರೆ. ರಾಜಕೀಯ ಉದ್ದೇಶದಿಂದ, ರಾಜಕೀಯ ಲಾಭಕ್ಕಾಗಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ದೇಶದಲ್ಲಿ ಇತಿಹಾಸ ತಿರುಚುವ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ ಬಂದ ದಿನದಿಂದಲೂ ಕಾಂಗ್ರೆಸ್ ಈ ಕೆಲಸ ಮಾಡುತ್ತಿದೆ. ರಾಜಕಾರಣಿಗಳು ರಾಜಕಾರಣ ಮಾಡಿ, ಇತಿಹಾಸದ ಬಗ್ಗೆ ಹೇಳಬೇಡಿ. ಇತಿಹಾಸ ಹೇಳಲು ತಜ್ಞರಿದ್ದಾರೆ, ಈ ಬಗ್ಗೆ ಸಮೀಕ್ಷೆ ಮಾಡಿಸಲಿ. ಜನರೇ ಈ ಬಗ್ಗೆ ತಮ್ಮ ಅಭಿಪ್ರಾಯ ಹೇಳುತ್ತಾರೆ. ಇದು ಒಂದು ಸಮುದಾಯವನ್ನು ಓಲೈಸಲು ನೀಡಿರುವ ಹೇಳಿಕೆ. ಯಾರೂ ಈ ರೀತಿಯ ಹೇಳಿಕೆ‌ ನೀಡಬಾರದು ಎಂದು ಹೇಳಿದರು.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.