AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ, ಸಿಸಿಬಿಗೆ ಸವಾಲು

ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ, ಸಿಸಿಬಿಗೆ ಸವಾಲು

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 17, 2026 | 10:35 AM

Share

ಕರ್ನಾಟಕ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಕೃಪಾ ಆಳ್ವ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಟಿಂಗ್‌ಗೆ ಬಳಸಿದ ಮೊಬೈಲ್ ತಮ್ಮ ಬಳಿ ಇಲ್ಲ ಎಂದು ಕೃಪಾ ಆಳ್ವ ಹೇಳಿದ್ದಾರೆ. 2022ರಲ್ಲಿ ನಡೆದ ವಿಡಿಯೋ ರೆಕಾರ್ಡಿಂಗ್‌ಗೆ ಬಳಸಿದ ಸಾಧನ ಮತ್ತು ಅನ್‌ಎಡಿಟೆಡ್ ವಿಡಿಯೋ ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ. ಹಳೆಯ ಮೊಬೈಲ್ ಹುಡುಕಿ ಕೊಡುವಂತೆ ಪೊಲೀಸರು ಸೂಚಿಸಿದ್ದಾರೆ.

ಬೆಂಗಳೂರು, ನವೆಂಬರ್ 17: ಕರ್ನಾಟಕದಲ್ಲಿ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದ ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವ ಸೋಮವಾರ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರು ಸ್ಟಿಂಗ್ ಕಾರ್ಯಾಚರಣೆಗೆ ಬಳಸಿದ ಮೊಬೈಲ್ ಫೋನ್ ಅನ್ನು ನೀಡುವಂತೆ ಕೇಳಿದಾಗ, ಕೃಪಾ ಆಳ್ವ ತಮ್ಮ ಬಳಿ ಅಂತಹ ಯಾವುದೇ ಮೊಬೈಲ್ ಇಲ್ಲ ಎಂದು ಉತ್ತರಿಸಿರುವುದಾಗಿ ತಿಳಿದುಬಂದಿದೆ. 2022ರಲ್ಲಿ ಈ ವಿಡಿಯೋ ರೆಕಾರ್ಡ್ ಆಗಿದೆ ಎಂಬುದು ತನಿಖೆ ವೇಳೆ ಪೊಲೀಸರಿಗೆ ತಿಳಿದುಬಂದಿದೆ. ಆದರೆ, ರೆಕಾರ್ಡಿಂಗ್‌ಗೆ ಬಳಸಿದ ಮೊಬೈಲ್ ಅಥವಾ ಸ್ಟಿಂಗ್ ಕ್ಯಾಮೆರಾ, ಹಾಗೆಯೇ ಅದರ ಅನ್‌ಎಡಿಟೆಡ್ ವೀಡಿಯೋ ತುಣುಕು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ. ಈ ಕುರಿತು ಪದೇ ಪದೇ ವಿಚಾರಣೆಗೆ ಹಾಜರಾಗುವ ಕೃಪಾ ಆಳ್ವ, ಸ್ಟಿಂಗ್ ಬಗ್ಗೆ ನನಗೆ ತಿಳಿದಿರಲಿಲ್ಲ ಮತ್ತು ಆ ಸಮಯದಲ್ಲಿ ಬಳಸಿದ ಮೊಬೈಲ್ ಈಗ ತಮ್ಮ ಬಳಿ ಇಲ್ಲ ಎಂದು ಹೇಳುತ್ತಿದ್ದಾರೆ.

ಕೃಪಾ ಆಳ್ವ ಪ್ರಸ್ತುತ ಬಳಸುತ್ತಿರುವ ಮೊಬೈಲ್ ಅನ್ನು ತನಿಖಾಧಿಕಾರಿಗಳಿಗೆ ನೀಡುವ ಭರವಸೆ ನೀಡಿದ್ದಾರೆ. ತನಿಖೆಯ ಪ್ರಗತಿಗಾಗಿ, ಪೊಲೀಸರು ಹಳೆಯ ಮೊಬೈಲ್ ಫೋನ್ ಅನ್ನು ಹುಡುಕಿ ನೀಡುವಂತೆ ಕೃಪಾ ಆಳ್ವಗೆ ಸೂಚಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಶಾಂತ್ ಮತ್ತು ರಾಕೇಶ್ ಶೆಟ್ಟಿ ಅವರಿಗೂ ಪೊಲೀಸರು ಮೊಬೈಲ್ ಹಾಗೂ ಅನ್‌ಎಡಿಟೆಡ್ ಫೂಟೇಜ್ ನೀಡುವಂತೆ ಕೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More