22 ಕೆರೆ ತುಂಬಿಸುವ ಯೋಜನೆಗೆ ಆದ್ಯತೆ, ಮಾಯಕೊಂಡ ಅಭಿವೃದ್ಧಿಗೆ ಬದ್ಧ: ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ

Updated on: Aug 08, 2026 | 4:49 PM

ಮೊದಲ ಬಾರಿಗೆ ಸಚಿವರಾಗಿರುವ ಕೆ.ಎಸ್. ಬಸವಂತಪ್ಪ ಅವರು ತಮ್ಮ ಕ್ಷೇತ್ರದ ಜನರ ಸೇವೆಗೆ ಸಿದ್ಧರಾಗಿದ್ದಾರೆ. ರೈತರ ಸಮಸ್ಯೆ, ಬೆಳೆ ಹಾನಿ ಪರಿಶೀಲನೆ, ಹಾಗೂ 22 ಕೆರೆ ಯೋಜನೆ ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಪೌರಕಾರ್ಮಿಕರ ಪುತ್ರನಾದ ತಮಗೆ ಸಚಿವ ಸ್ಥಾನ ದೊರೆತಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ನ್ಯಾಯದ ಪ್ರತಿರೂಪ ಎಂದಿದ್ದಾರೆ.

ಬೆಂಗಳೂರು, ಆ.8: ಕರ್ನಾಟಕದ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಕೆ.ಎಸ್. ಬಸವಂತಪ್ಪ ಅವರು ಮೊದಲ ಬಾರಿಗೆ ಸಚಿವರಾದ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದ ಜನರ ಆಶೀರ್ವಾದದಿಂದ ಈ ಸ್ಥಾನ ಲಭಿಸಿದೆ ಎಂದು ಹೇಳಿರುವ ಅವರು, ಮಾಯಕೊಂಡ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಪ್ರಮುಖವಾಗಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಬೆಳೆ ಹಾನಿ ಪರಿಶೀಲಿಸಿ ಪರಿಹಾರ ಒದಗಿಸಲು ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅಲ್ಲದೆ, ತಮ್ಮ ಕ್ಷೇತ್ರದ ಬಹುದಿನಗಳ ಬೇಡಿಕೆಯಾದ 22 ಕೆರೆಗಳ ಯೋಜನೆಯನ್ನು ಪೂರ್ಣಗೊಳಿಸಲು ಬದ್ಧರಾಗಿದ್ದಾರೆ. ಹಿಂದೆ ವಿಫಲವಾಗಿದ್ದ ಈ ಯೋಜನೆಯನ್ನು ಪುನಶ್ಚೇತನಗೊಳಿಸಲು 400 ಕೋಟಿ ರೂ. ಅನುದಾನವನ್ನು ತರಿಸಿದ್ದು, ನೀರಿಗಾಗಿ ಹೋರಾಟ ನಡೆಸಿದ್ದ ತಮ್ಮ ಕನಸು ನನಸಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪೌರಕಾರ್ಮಿಕರ ಪುತ್ರನಾಗಿ ಸಚಿವ ಸ್ಥಾನಕ್ಕೇರಿದ್ದು, ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯ ಮತ್ತು ಯುವಕರಿಗೆ ಆದ್ಯತೆ ನೀಡುವ ಕನಸು ನನಸಾಗಿದೆ ಎಂದು ಬಸವಂತಪ್ಪ ತಿಳಿಸಿದ್ದಾರೆ. ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸಿ ರಾಜ್ಯದ ಜನತೆಗೆ ಉತ್ತಮ ಸೇವೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More