ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ

Updated on: Jun 11, 2025 | 5:04 PM

ಒಂದೇ ಪಕ್ಷದಲ್ಲಿದ್ದರೂ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ದೂರ ದೂರವಾಗಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೆಎಸ್ ಈಶ್ವರಪ್ಪ ಇದೀಗ ಮತ್ತೆ ಒಂದಾಗಿದ್ದಾರೆ. ಹಾವೇರಿ ಲೋಕಸಭಾ ಟಿಕೆಟ್ ತಪ್ಪಿಸಿದ್ದಾರೆಂದು ಈಶ್ವರಪ್ಪ, ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಶಿವಮೊಗ್ಗದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರ ವಿರುದ್ಧವೂ ಸ್ಪರ್ಧೆ ಮಾಡಿದ್ದರು. ಇದರಿಂದ ಈಶ್ವರಪ್ಪನವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆದ್ರೆ, ಇದೀಗ ರಾಜಕೀಯ ವೈಷಮ್ಯ ಮರೆತಿದ್ದಾರೆ.

ಶಿವಮೊಗ್ಗ, (ಜೂನ್ 11): ಒಂದೇ ಪಕ್ಷದಲ್ಲಿದ್ದರೂ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ದೂರ ದೂರವಾಗಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೆಎಸ್ ಈಶ್ವರಪ್ಪ ಇದೀಗ ಮತ್ತೆ ಒಂದಾಗಿದ್ದಾರೆ. ಹಾವೇರಿ ಲೋಕಸಭಾ ಟಿಕೆಟ್ ತಪ್ಪಿಸಿದ್ದಾರೆಂದು ಈಶ್ವರಪ್ಪ, ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಶಿವಮೊಗ್ಗದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರ ವಿರುದ್ಧವೂ ಸ್ಪರ್ಧೆ ಮಾಡಿದ್ದರು. ಇದರಿಂದ ಈಶ್ವರಪ್ಪನವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆದ್ರೆ, ಇದೀಗ ರಾಜಕೀಯ ವೈಷಮ್ಯ ಮರೆತು , ರಾಘವೇಂದ್ರ ಪುತ್ರ ಸುಭಾಷ್ ವಿವಾಹದ ಆರತಕ್ಷತೆ ಈಶ್ವರಪ್ಪ ಪಾಲ್ಗೊಂಡಿದ್ದಾರೆ. ಆರತಕ್ಷತೆಯಲ್ಲಿ ಪುತ್ರ ಕೆ.ಇ.ಕಾಂತೇಶ್ ಜೊತೆ ಪಾಲ್ಗೊಂಡ ಈಶ್ವರಪ್ಪಗೆ ಯಡಿಯೂರಪ್ಪ ಶಾಲು ಹೊದಿಸಿ ಗೌರವಿಸಿ ಆಪ್ತತೆ ತೋರಿದರು. ಇನ್ನು ಈಶ್ವರಪ್ಪ, ವಿಜಯೇಂದ್ರನ ಬೆನ್ನು ತಟ್ಟಿ ಆತ್ಮೀಯತೆಯಿಂದ ಮಾತನಾಡಿಸಿದರು.