AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former DyCM presser: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತಾವು ಬರೆದಿರುವ ಪತ್ರವನ್ನು ಸುದ್ದಿಗೋಷ್ಟಿಯಲ್ಲಿ ಓದಿದ ಕೆಎಸ್ ಈಶ್ವರಪ್ಪ

Former DyCM presser: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತಾವು ಬರೆದಿರುವ ಪತ್ರವನ್ನು ಸುದ್ದಿಗೋಷ್ಟಿಯಲ್ಲಿ ಓದಿದ ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 11, 2023 | 5:09 PM

Share

ಮುಂದಿನ ದಿನಗಳಲ್ಲಿ ಒಬ್ಬ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇವೆ ಸಲ್ಲಿಸುವುದಾಗಿ ಈಶ್ವರಪ್ಪ ಪತ್ರದಲ್ಲಿ ಹೇಳಿದ್ದಾರೆ.

ಶಿವಮೊಗ್ಗ: ದಿಢೀರನೆ ಚುನಾವಣಾ ರಾಜಕೀಯಕ್ಕೆ (electoral politics) ನಿವೃತ್ತಿ ಘೋಷಿಸಿದ ಹಿರಿಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪನವರು (KS Eshwarappa) ತಮ್ಮ ನಿರ್ಧಾರ ಪ್ರಕಟಿಸಿದ ಬಳಿಕ ಮೊದಲ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿ ತಾವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರಿಗೆ ಬರೆದ ಪತ್ರವನ್ನು ತೋರಿಸಿದರಲ್ಲದೆ ಅದರಲ್ಲಿದ್ದ ಸಾರಾಂಶವನ್ನು ಓದಿ ಹೇಳಿದರು. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಜ್ಯದ ಉಪ ಮುಖ್ಯಮಂತ್ರಿವರೆಗೆ ದೊಡ್ಡ ಮತ್ತು ಜವಾಬ್ದಾರಿಯುತ ಸ್ಥಾನಗಳನ್ನು ನೀಡಿ ಗೌರವಿಸಿದ್ದಕ್ಕೆ ಅವರು ಪಕ್ಷಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಸ್ವಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ದೂರ ಸರಿಯುತ್ತಿರುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಬ್ಬ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇವೆ ಸಲ್ಲಿಸುವುದಾಗಿ ಅವರು ಪತ್ರದಲ್ಲಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ