ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ

Updated on: Jan 09, 2026 | 5:57 PM

ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ.

ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರಿಗೆ ಪೊಲೀಸ್ ಭದ್ರತೆ ಹಾಗೂ ಎಸ್ಕಾರ್ಟ್ ವ್ಯವಸ್ಥೆ ಒದಗಿಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಎಸ್ಕಾರ್ಟ್ ಹಾಗೂ ಪೊಲೀಸ್ ಭದ್ರತೆಯನ್ನು ಹಿಂಪಡೆದಿತ್ತು . ಇದೀಗ ಮತ್ತೆ ತಮಗೆ Y ಸೆಕ್ಯೂರಿಟಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.