ಶಿವಮೊಗ್ಗ: ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಫಿ ಹೊಡೆಯಲು ಅವಕಾಶ!
ಶಿವಮೊಗ್ಗದ KSOU ಪ್ರಾದೇಶಿಕ ಕಚೇರಿಯಲ್ಲಿ ನಡೆಯುತ್ತಿರುವ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು (ಮಾಸ್ ಕಾಪಿ) ಆರೋಪ ಕೇಳಿಬಂದಿದೆ. ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ಕುಮ್ಮಕ್ಕಿನಿಂದ ಹಣ ಪಡೆದು ಕಾಪಿ ಹೊಡೆಯಲು ಅವಕಾಶ ನೀಡಲಾಗುತ್ತಿದೆ ಎಂದು ದೂರಲಾಗಿದ್ದು, ಪ್ರಾಮಾಣಿಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಶಿವಮೊಗ್ಗ, ಅಕ್ಟೋಬರ್ 23: ಜಿಲ್ಲೆಯ ಆಲ್ಕೋಳ ವೃತ್ತದ ಬಳಿ ಇರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆಯುತ್ತಿರುವ ವಿವಿಧ ಪರೀಕ್ಷೆಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದಿದ್ದು, ಸಾಮೂಹಿಕ ನಕಲು (ಮಾಸ್ ಕಾಪಿ) ಮುಂದುವರಿದಿದೆ ಎಂದು ಆರೋಪಿಸಲಾಗಿದೆ.
ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಈ ಅಕ್ರಮ ನಡೆಯುತ್ತಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ ಮುಕ್ತವಾಗಿ ಕಾಪಿ ಹೊಡೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ದೂರಲಾಗಿದೆ. ಇದರಿಂದ ಕಷ್ಟಪಟ್ಟು ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ. ಹಣ ಪಡೆದು ಈ ರೀತಿ ಸಾಮೂಹಿಕ ನಕಲಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 23, 2026 11:05 AM
Loading...
Unable to load recommendations.
Follow Us
