ಕುಮಟಾ ಬಳಿ ಕೆಎಸ್ಆರ್ಟಿಸಿ ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ
ಕುಮಟಾದ ಮಾನೀರು ದೇಗುಲದ ಬಳಿ ಬೊಲೆರೋ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ 8 ಮಂದಿ ಗಾಯಗೊಂಡಿದ್ದಾರೆ. ಬೊಲೆರೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಘಾತ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಸ್ಥಳದ ವಿಡಿಯೋ ಇಲ್ಲಿದೆ.
ಕಾರವಾರ, ಜನವರಿ 29: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ. ಬೊಲೆರೋ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು ತೆರಳಿದ್ದ ಬೊಲೆರೋ ವಾಹನ, ಕುಮಟಾದಿಂದ ಕಾರವಾರದ ಕಡೆಗೆ ಮರಳುತ್ತಿದ್ದಾಗ ಗೋಕರ್ಣದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

