ಕುಮಟಾ ಬಳಿ ಕೆಎಸ್​​ಆರ್​​​ಟಿಸಿ ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ

Edited By:

Updated on: Jan 29, 2026 | 2:32 PM

ಕುಮಟಾದ ಮಾನೀರು ದೇಗುಲದ ಬಳಿ ಬೊಲೆರೋ ವಾಹನ ಹಾಗೂ ಕೆಎಸ್​​ಆರ್​​​ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ 8 ಮಂದಿ ಗಾಯಗೊಂಡಿದ್ದಾರೆ. ಬೊಲೆರೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಘಾತ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಸ್ಥಳದ ವಿಡಿಯೋ ಇಲ್ಲಿದೆ.

ಕಾರವಾರ, ಜನವರಿ 29: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ಕೆಎಸ್​​ಆರ್​​​ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ. ಬೊಲೆರೋ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು ತೆರಳಿದ್ದ ಬೊಲೆರೋ ವಾಹನ, ಕುಮಟಾದಿಂದ ಕಾರವಾರದ ಕಡೆಗೆ ಮರಳುತ್ತಿದ್ದಾಗ ಗೋಕರ್ಣದ ಕಡೆಗೆ ತೆರಳುತ್ತಿದ್ದ ಕೆಎಸ್​​ಆರ್​​​ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More