AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 31, 2025 | 3:25 PM

Share

ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯ ಲೋಕಾಪುರ ಹೊರವಲಯದಲ್ಲಿ ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್​​ ಚಾಲಕನ ಕಾಲು ತುಂಡಾಗಿದ್ದರೆ, ಹಲವು ಪ್ರಯಾನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋಕಾಪೂರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಬಾಗಲಕೋಟೆ, ಡಿಸೆಂಬರ್​​ 31: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 31, 2025 03:24 PM