KSRTC ಬಸ್-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ
ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯ ಲೋಕಾಪುರ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್ ಚಾಲಕನ ಕಾಲು ತುಂಡಾಗಿದ್ದರೆ, ಹಲವು ಪ್ರಯಾನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋಕಾಪೂರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಬಾಗಲಕೋಟೆ, ಡಿಸೆಂಬರ್ 31: ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 31, 2025 03:24 PM