AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 10, 2026 | 12:27 PM

Share

ಚಾಮರಾಜನಗರ ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​​ನ ಆಕ್ಸೆಲ್ ತುಂಡಾದ ಘಟನೆ ನಡೆದಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್‌ನ ಆಕ್ಸೆಲ್ ಕಟ್​​ ಆಗಿದ್ದು, ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮಾರ್ಗ ಮಧ್ಯೆಯೇ ಬಸ್​ ನಿಂತ ಪರಿಣಾಮ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಪರದಾಡಿದ್ದಾರೆ. ಬಸ್ ನಿರ್ವಹಣೆ ಬಗ್ಗೆ ಸಾರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್​ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More