ಹುಬ್ಬಳ್ಳಿಯಿಂದ ಸವದತ್ತಿಗೆ ಹೊರಟಿದ್ದ ಬಸ್ಸು ಉರುಳಿಬಿದ್ದು 15 ಜನರಿಗೆ ಗಾಯ, ಬಸ್ಸಿನ ಆ್ಯಕ್ಸೆಲ್ ಮುರಿದು ದುರ್ಘಟನೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 27, 2025 | 4:02 PM

ಕೆಎಸ್ಸಾರ್ಟಿಸಿ ಒಡೆತನಕ್ಕೆ ಸೇರಿದ ಬಸ್ಸುಗಳು ಪದೇಪದೆ ಅಪಘಾಗತಗಳಿಗೆ ಈಡಾಗುತ್ತಿರುವುದು ಆತಂಕದ ವಿಷಯವಾಗಿದೆ ಅಂತ ಮೊದಲು ಸಹ ನಾವು ವರದಿ ಮಾಡಿದ್ದೇವೆ. ಆ್ಯಕ್ಸೆಲ್ ಮುರಿದು, ಟೈರ್ ಬರ್ಸ್ಟ್ ಆಗುವುದು ಸಾಮಾನ್ಯ ಸಂಗತಿಯಲ್ಲ. ಡಿಪೋಗಳಲ್ಲಿ ಕೆಲಸ ಮಾಡುವ ಮೆಕ್ಯಾನಿಕ್ ಗಳು ಅಸಡ್ಡೆ ತೋರಿರುವ ಸಾಧ್ಯತೆ ಇದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂಥ ಸಂಗತಿಗಳ ಕಡೆ ಗಮನ ಹರಿಸಬೇಕು.

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಸವದತ್ತಿಗೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಸೇರಿದ್ದ ಬಸ್ಸಿನ ಆ್ಯಕ್ಸೆಲ್ ಕಟ್ಟಾಗಿದ್ದರಿಂದ ಬ್ಯಾಹಟ್ಟಿಯಿಂದ ಕೊಂಚ ದೂರದಲ್ಲಿ ಉರುಳಿಬಿದ್ದು 15 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದ್ದ್ದು ಚಿಕಿತ್ಸೆ ಪಡೆಯುತ್ತಿರುವ ಕೆಲ ಗಾಯಾಳುಗಳು ಮಾಧ್ಯಮಗಳೊಂದಿಗೆ ಮಾತಾಡಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಅವರು ಹೇಳುವ ಪ್ರಕಾರ 8-10 ಜನ ಗಂಭೀರವಾಗಿ ಗಾಯಗೊಂಡಿದ್ದು ಬಸ್ಸೇನಾದರೂ ಹತ್ತಿರದಲ್ಲೇ ಇರುವ ಗುಂಡಿಗೆ ಬಿದ್ದಿದ್ದರೆ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಾರ್ಮಾಡಿ ಘಾಟ್ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್: ಆಮೇಲೇನಾಯ್ತು?

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.