ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​

Edited By:

Updated on: Mar 03, 2026 | 6:23 PM

ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದೆ. ಜೂನಿಯರ್ ಕಾಲೇಜು ಬಳಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡರೂ, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ, ಆದರೆ ಬಸ್‌ನ ಮುಂಭಾಗ ಹಾನಿಯಾಗಿದೆ. ಚಿಕ್ಕಮಗಳೂರು ಡಿಪೋದ ಬಸ್ ಹಾಸನಕ್ಕೆ ತೆರಳುತ್ತಿತ್ತು.

ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್​​​​​​ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಸುಳಿವು ಸಿಗುತ್ತಿದ್ದಂತೆ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಪ್ರಯಾಣಿಕರೆಲ್ಲರನ್ನು ಕೆಳಗಿಳಿಯುವಂತೆ ಸೂಚಿಸಿದರು. ಇದರಿಂದಾಗಿ ಬಸ್ಸಿನಲ್ಲಿದ್ದ ಹತ್ತಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಆದರೂ ಬಸ್ಸಿನ ಮುಂಭಾಗ ಹಾನಿಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More