ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಆತಂಕ ಸೃಷ್ಟಿಸಿದ ಕೆಎಸ್ಆರ್ಟಿಸಿ ಬಸ್, ವಿಡಿಯೋ ನೋಡಿ
ಟೋಲ್ ತಪ್ಪಿಸಲು ಚಾಲಕನೋರ್ವ ಕೆಎಸ್ಆರ್ಟಿಸಿ ಬಸನ್ನು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಒನ್ ವೇನಲ್ಲಿ ಚಲಿಸಿ ಆತಂಕ ಸೃಷ್ಟಿಸಿದ್ದಾನೆ. ಇದೀಗ ವಿಡಿಯೋ ವೈರಲ್ ಆಗಿದೆ.
ರಾಮನಗರ, (ಜುಲೈ 19): ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಆದ್ರೆ, ಇದರ ಮಧ್ಯೆ ಕೆಎಸ್ಆರ್ಟಿಸಿ ಬಸ್ವೊಂದು ಟೋಲ್ ತಪ್ಪಿಸಿಕೊಳ್ಳಲು ಒನ್ ವೇನಲ್ಲಿ ಚಲಿಸಿದೆ. ರಾಮನಗರ ಜಿಲ್ಲೆಯ ಬಿಡದಿಯ ಶೇಷಗಿರಿ ಟೋಲ್ ಬಳಿ ಕೆಎಸ್ಆರ್ಟಿಸಿ ಒನ್ ವೇನಲ್ಲಿ ಸಂಚರಿಸಿದೆ. 2 ಕಿ.ಮಿ ದೂರದ ವರೆಗೂ ಡೇಂಜರ್ ಡ್ರೈವ್ ಮಾಡಿ ಆತಂಕ ಸೃಷ್ಟಿದ ಕೆಎಸ್ಆರ್ಟಿಸಿ ಬಸ್ ವಿಡಿಯೋವನ್ನು ಅಭಿಷೇಕ್ ಎಂಬುವವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಇನ್ನು ಟ್ವಿಟ್ಟರ್ನಲ್ಲಿ ಈ ವಿಡಿಯೋ ನೋಡಿದ ನೆಟ್ಟಿಗರು ಕೆಎಸ್ಆರ್ಟಿಸಿ ಬಸ್ ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
