ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಆತಂಕ ಸೃಷ್ಟಿಸಿದ ಕೆಎಸ್​ಆರ್​ಟಿಸಿ ಬಸ್, ವಿಡಿಯೋ ನೋಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Jul 19, 2023 | 10:24 AM

ಟೋಲ್​ ತಪ್ಪಿಸಲು ಚಾಲಕನೋರ್ವ ಕೆಎಸ್​ಆರ್​ಟಿಸಿ ಬಸನ್ನು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಒನ್​ ವೇನಲ್ಲಿ ಚಲಿಸಿ ಆತಂಕ ಸೃಷ್ಟಿಸಿದ್ದಾನೆ. ಇದೀಗ ವಿಡಿಯೋ ವೈರಲ್ ಆಗಿದೆ.

ರಾಮನಗರ, (ಜುಲೈ 19): ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಆದ್ರೆ, ಇದರ ಮಧ್ಯೆ ಕೆಎಸ್​ಆರ್​ಟಿಸಿ ಬಸ್​ವೊಂದು ಟೋಲ್ ತಪ್ಪಿಸಿಕೊಳ್ಳಲು ಒನ್ ವೇನಲ್ಲಿ ಚಲಿಸಿದೆ. ರಾಮನಗರ ಜಿಲ್ಲೆಯ ಬಿಡದಿಯ ಶೇಷಗಿರಿ ಟೋಲ್ ಬಳಿ ಕೆಎಸ್​ಆರ್​ಟಿಸಿ ಒನ್ ವೇನಲ್ಲಿ ಸಂಚರಿಸಿದೆ. 2 ಕಿ.ಮಿ ದೂರದ ವರೆಗೂ ಡೇಂಜರ್ ಡ್ರೈವ್ ಮಾಡಿ ಆತಂಕ ಸೃಷ್ಟಿದ ಕೆಎಸ್​ಆರ್​ಟಿಸಿ ಬಸ್​ ವಿಡಿಯೋವನ್ನು ಅಭಿಷೇಕ್ ಎಂಬುವವರು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಇನ್ನು ಟ್ವಿಟ್ಟರ್​ನಲ್ಲಿ ಈ ವಿಡಿಯೋ ನೋಡಿದ ನೆಟ್ಟಿಗರು ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Loading...
Unable to load recommendations.
Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ