SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ, ವಿಡಿಯೋ ವೈರಲ್

Updated on: Mar 17, 2026 | 10:07 PM

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದು. ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಸಹಾಯ ಮಾಡಿ ಎಂದು ಕಂಡಕ್ಟರ್​​ ಒಬ್ಬರು ಮನವಿ ಮಾಡಿದ್ದಾರೆ. ಡ್ರೈವರ್ ಸಾಹೇಬ್ರೆ ಎಸ್ಎಸ್​ಎಲ್​​ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ ಕೈ ಮಾಡಿದರೂ ಬಸ್ ನಿಲ್ಲಿಸಿ ಎಂದು ಕಂಡಕ್ಟರ್ ಹೇಳಿದ್ದು, ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ​

ಬೆಂಗಳೂರು, (ಮಾರ್ಚ್ 17): 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದು. ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಕಂಡಕ್ಟರ್ ಮನ​ ಮಿಡಿದಿದ್ದು, ಡ್ರೈವರ್ ಸಾಹೇಬ್ರೆ ಎಸ್ಎಸ್​ಎಲ್​​ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ ಕೈ ಮಾಡಿದರೂ ಬಸ್ ನಿಲ್ಲಿಸಿ ಎಂದು ಕಂಡಕ್ಟರ್ ಹೇಳಿದ್ದಾರೆ.  ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುತ್ತಿರುವ ನಮ್ಮ ಮಕ್ಕಳ ಬಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರು ತೋರಿದ ಕಳಕಳಿ ಹೃದಯಸ್ಪರ್ಶಿ. ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ​

ಇದನ್ನೂ ಓದಿ: ​SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ

Published on: Mar 17, 2026 04:50 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More