ಪೊಲೀಸರ ಬಳಿ ಅಬ್ಬರಿಸಿದ ಅಶೋಕ್: ಏಯ್ ನಾನು ವಿಪಕ್ಷ ನಾಯಕ, ನನ್ನ ಮುಟ್ಟಿದರೆ ಹುಷಾರ್ ಎಂದ ಸಾಮ್ರಾಟ್
ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇಕಡಾ 15ರಷ್ಟು ಏರಿಕೆ ಮಾಡುವುದಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮೆಜೆಸ್ಟಿಕ್‌ನಲ್ಲಿ ವಿಶಿಷ್ಟ ಪ್ರತಿಭಟನೆ ನಡೆಸಿ, ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಕ್ಷಮೆ ಕೇಳಿದರು. ಪೊಲೀಸರ ತಡೆಯನ್ನು ಧಿಕ್ಕರಿಸಿ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಾಲ್ಕೂ ನಿಗಮಗಳ ಎಲ್ಲಾ ಮಾದರಿಯ ಬಸ್ಗಳ ಟಿಕೆಟ್ ದರ ಶೇ15ರಷ್ಟು ಏರಿಕೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇದಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಶುಕ್ರವಾರ (ಜ.03) ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಟಿಕೆಟ್ ದರ ಏರಿಸಲು ಮುಂದಾಗಿದ್ದಕ್ಕೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಕ್ಷಮೆ ಕೇಳಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮುಖವಾಡ ಧರಿಸಿದ ಕೆಲ ಬಿಜೆಪಿ ಕಾರ್ಯಕರ್ತರು ಪ್ರಯಾಣಿಕರ ಕಾಲು ಹಿಡಿದು ಕ್ಷಮೆ ಕೇಳಿದರು.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಪ್ರವೇಶಿಸುತ್ತಿದ್ದ ವೇಳೆ ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ವಿಪಕ್ಷ ನಾಯಕ ಆರ್. ಅಶೋಕ್ “ವಶಕ್ಕೆ ಪಡೆದರೆ ಕೋರ್ಟ್ಗೆ ಹೋಗುವೆ. ನಾವು ಪ್ರತಿಭಟನೆ ಮಾಡಲು ಬಂದಿಲ್ಲ. ಪ್ರಯಾಣಿಕರಿಗೆ ಹೂವು ಕೊಡಲು ಬಂದಿದ್ದೆನೆ. ಹೊಡಿಯುತ್ತೀಯಾ, ಹೊಡಿ, ಹೊಡಿ, ಏಯ್ ನಾನು ವಿರೋಧ ಪಕ್ಷದ ನಾಯಕ, ನನ್ನನ್ನು ಮುಟ್ಟಿದರೆ ಹುಷಾರ್. ಜನ್ಮದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕು ಹಾಗೆ ಮಾಡುವೆ.” ಎಂದು ಅಬ್ಬರಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ