KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು: ವಿಡಿಯೋ ವೈರಲ್​​

Edited By:

Updated on: Jan 14, 2026 | 1:38 PM

ಪ್ರಯಾಣಿಕನ ಮೇಲೆ ಬಸ್​​ ಹರಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ KSRTC ಬಸ್​​ ನಿಲ್ದಾಣದಲ್ಲಿ ನಡೆದಿದೆ. ನಿರ್ಲಕ್ಷ್ಯದ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾತಾಳುವಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಜನವರಿ 7ರಂದು ನಡೆದ ಘಟನೆಯ ದೃಶ್ಯ ವೈರಲ್ ಆಗಿದೆ.

ಚಿಕ್ಕಮಗಳೂರು, ಜನವರಿ 14: KSRTC ಬಸ್​​ನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ಚಿಕ್ಕಮಗಳೂರಿನ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕುರುವಂಗಿ ಮೂಲದ ಆಂಜನೇಯ (75) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುವಂಗಿ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಂಜನೇಯ ಬಂದಿದ್ದಾಗ ಅವಘಡ ಸಂಭವಿಸಿದ್ದು, ನಿರ್ಲಕ್ಷ್ಯದ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಜನವರಿ 7ರಂದು ನಡೆದ ಘಟನೆಯ ದೃಶ್ಯ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More