AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್: ಸಿಸಿ ಕ್ಯಾಮರಾದಲ್ಲಿ ಭಯಾನಕ ವಿಡಿಯೋ ಸೆರೆ

ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್: ಸಿಸಿ ಕ್ಯಾಮರಾದಲ್ಲಿ ಭಯಾನಕ ವಿಡಿಯೋ ಸೆರೆ

ಪ್ರಶಾಂತ್​ ಬಿ.
| Updated By: Ganapathi Sharma|

Updated on: May 20, 2025 | 11:19 AM

Share

ಕೆಎಸ್​ಆರ್​ಟಿಸಿ ಬಸ್ಸೊಂದು ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಬೈಕ್​ಗಳಿಗೆ ಡಿಕ್ಕಿಹೊಡೆದು ರಸ್ತೆ ಬದಿ ಕಂದಕಕ್ಕೆ ಪಲ್ಟಿಯಾದ ಭೀಕರ ಘಟನೆಗೆ ಕಗ್ಗಲಿಪುರ ಸಾಕ್ಷಿಯಾಗಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ. ಬಸ್ ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ರಾಮನಗರ, ಮೇ 20: ಕನಕಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಕಗ್ಗಲಿಪುರದಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಬೈಕ್​​ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯ ಪಿಎಸ್​ಐ ನಾಗರಾಜ್(53)ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್​​ನಲ್ಲಿದ್ದ ಹಲವರಿಗೂ ಗಾಯಗಳಾಗಿವೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ