ಡಿವೈಡರ್ ಹಾರಿ ಬೈಕ್ಗೆ ಗುದ್ದಿ ಪಲ್ಟಿಯಾದ ಕೆಎಸ್ಆರ್ಟಿಸಿ ಬಸ್: ಸಿಸಿ ಕ್ಯಾಮರಾದಲ್ಲಿ ಭಯಾನಕ ವಿಡಿಯೋ ಸೆರೆ
ಕೆಎಸ್ಆರ್ಟಿಸಿ ಬಸ್ಸೊಂದು ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಬೈಕ್ಗಳಿಗೆ ಡಿಕ್ಕಿಹೊಡೆದು ರಸ್ತೆ ಬದಿ ಕಂದಕಕ್ಕೆ ಪಲ್ಟಿಯಾದ ಭೀಕರ ಘಟನೆಗೆ ಕಗ್ಗಲಿಪುರ ಸಾಕ್ಷಿಯಾಗಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ. ಬಸ್ ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.
ರಾಮನಗರ, ಮೇ 20: ಕನಕಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕಗ್ಗಲಿಪುರದಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯ ಪಿಎಸ್ಐ ನಾಗರಾಜ್(53)ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ನಲ್ಲಿದ್ದ ಹಲವರಿಗೂ ಗಾಯಗಳಾಗಿವೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.