ಯಲ್ಲಾಪುರ: ಕಣ್ಣಿಗೇರಿ ಬಳಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿ, 17 ಜನರಿಗೆ ಗಾಯ

Edited By:

Updated on: Feb 11, 2025 | 10:55 AM

ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿ 17 ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಕಾರವಾರ, ಫೆಬ್ರವರಿ 11: ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 17 ಜನ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಸಂಭವಿಸಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ