ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ! 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು, ಮಾರ್ಚ್ 21: ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us