AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 01, 2026 | 1:55 PM

Share

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪೊನ್ನಾಚಿ ತಿರುವಿನಲ್ಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಹಿನ್ನಲೆ ಸಂಚಾರ ದಟ್ಟಣೆ ಉಂಟಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ.

ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್​​ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More